ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

0
Spread the love

ಬೆಂಗಳೂರು: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (HSRP) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ವಿಸ್ತರಣೆ ಮಾಡಿದೆ.

Advertisement

ಹೌದು ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಹೈಸೆಕ್ಯೂರಿಟಿ ನಂಬರ್​ ಪ್ಲೇಟ್​ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಮಾಡಿಕೊಳ್ಳಬೇಕು.

ಏನಿದು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  • https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  • ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  • ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

Spread the love

LEAVE A REPLY

Please enter your comment!
Please enter your name here