ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್: 5 ಸಾವಿರ ಕೋಟಿ ಅನುದಾನ ಮೀಸಲಿಟ್ಟ ರಾಜ್ಯ ಸರ್ಕಾರ!

0
Spread the love

ಕಲಬುರ್ಗಿ:- ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ ಕೊಟ್ಟಿರುವ ರಾಜ್ಯ ಸರ್ಕಾರವು 5 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ.

Advertisement

ಈ ಬಗ್ಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ CM ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕಕ್ಕೆ ಈ ವರ್ಷ 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ. ಬಜೆಟ್​ನಲ್ಲಿ ಘೋಷಿಸಿದ್ದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂ. ಬೀದರ್, ರಾಯಚೂರು ನಗರ ಪಾಲಿಕೆ ಮಾಡಲು ತೀರ್ಮಾನಿಸಲಾಗಿದೆ. ಬೀದರ್ ಮತ್ತು ಕಲಬುರಗಿಯಲ್ಲಿ ಕುಡಿಯುವ ನೀರು ಯೋಜನೆ ಮಾಡಲಾಗುವುದು. 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯ ಬಗ್ಗೆ ಕೇಂದ್ರಕ್ಕೂ ಮಾಹಿತಿ ನೀಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಸಚಿವರು ಹಾಗೂ ಹೈದರಾಬಾದ್ ಕರ್ನಾಟಕದ ಭಾಗದ ಶಾಸಕರು ಕಲಬುರಗಿಯಲ್ಲೇ ಸಂಪುಟ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು. ಹೀಗಾಗಿ ಕಲಬುರಗಿಯಲ್ಲೇ ಸಂಪುಟ ಸಭೆ ಮಾಡೋಣ ಎಂದಿದ್ದೆ. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 371ಜೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಸಂವಿಧಾನದಲ್ಲಿ ಸೇರ್ಪಡೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಟ್ಟ 11,770 ಕೋಟಿಯಲ್ಲಿ ಕೃಷಿಗೆ 100 ಕೋಟಿ ರೂ., ಕೈಗಾರಿಕೆಗೆ 1550 ಕೋಟಿ ರೂ., ಅರಣ್ಯ ಇಲಾಖೆ 37 ಕೋಟಿ ರೂ., ಆರೋಗ್ಯ ಇಲಾಖೆಗೆ 610 ಕೋಟಿ ರೂ. ಹೀಗೆ ಎಲ್ಲ ಇಲಾಖೆಗೂ ಹಂಚಿಕೆ ಆಗಿದೆ ಎಂದು ಹೇಳಿದ್ದಾರೆ.

ಪ್ರತ್ಯೇಕ ಸಚಿವಾಲಯ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರೂ. ಈ ವರ್ಷ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಇದುವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. 371ಜೆ ಸೇರ್ಪಡೆಯಾಗಿ 10 ವರ್ಷ ಆಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಕೂಡ 5000 ಕೋಟಿ ಹಣ ನೀಡಬೇಕು ಎಂದು ನಿರ್ಣಯ ಮಾಡಿದ್ದೇವೆ. ಖಾಲಿ ಇರುವ 17439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here