ಗುಡ್ ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
Spread the love

ಬೆಂಗಳೂರು: ನಮ್ಮ ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಆಗುವ ಹಾಗೆ ಜಾರಿಗೆ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ ಆಗಿದೆ. ಈ ಒಂದು ಯೋಜನೆಯ ಮೂಲಕ ಸರ್ಕಾರವು ಪ್ರತಿ ತಿಂಗಳು ಕೂಡ ₹2000 ರೂಪಾಯಿಗಳನ್ನು ಮಹಿಳೆಯರ ಖಾತೆಗೆ ಹಾಕುವುದಾಗಿ ತಿಳಿಸಿತ್ತು.

Advertisement

ಆದ್ರೇ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಮೂರು ಕಂತಿನ ಹಣ ಬಾರದೇ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.  ಇದೀಗ ಗೃಹಲಕ್ಷ್ಮಿಯರಿಗೆ ಹಣ ಸಿಗುವ ಭರವಸೆ ಕೂಡ ಸಿಕ್ಕಿದೆ. ಹೌದು ಈ ತಿಂಗಳು ಅಂದ್ರೆ ಮೇ ತಿಂಗಳಲ್ಲಿ ಮೂರು ಕಂತಿನ ಹಣ ಬಿಡುಗಡೆಗೆ ಮಾಡೋದಾಗಿ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

 


Spread the love

LEAVE A REPLY

Please enter your comment!
Please enter your name here