ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

0
Spread the love

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

Advertisement

ನವೆಂಬರ್ 11ರಂದು ವಾರಾಂತ್ಯ ಶನಿವಾರ, 12 ರಂದು ಭಾನುವಾರ,ನರಕ ಚತುರ್ದಶಿ, 13 ರಂದು ಸೋಮವಾರ ಅಮವಾಸೆ,ಲಕ್ಷ್ಮೀ ಪೂಜೆ ಹಾಗೂ 14ರಂದು ಮಂಗಳವಾರ ಬಲಿಪಾಡ್ಯಮಿ ಇದೆ.

ಹಬ್ಬ ಆಚರಿಸಲು ನ. 10ರಂದು ಶುಕ್ರವಾರ ಮತ್ತು 11 ರಂದು ಶನಿವಾರ ಬೆಂಗಳೂರು, ಮಂಗಳೂರು,ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.

ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕಲವಾಗುವಂತೆ ನ.10 ಹಾಗೂ11ರಂದು ಬೆಂಗಳೂರು, ಮಂಗಳೂರು,ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ,ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ವ್ಯವಸ್ಥೆಮಾಡಲಾಗಿದೆ.

ಇದಕ್ಕಾಗಿ ಮಲ್ಟಿ ಅ್ಯಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.

ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ.


Spread the love

LEAVE A REPLY

Please enter your comment!
Please enter your name here