ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಒಡೆಯರ ಮಲ್ಲಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶೇ. 100ರಷ್ಟಾಗಿದೆ. ಪರೀಕ್ಷೆಗೆ ಕುಳಿತ 49 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕ, 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
Advertisement
ವಿದ್ಯಾರ್ಥಿಗಳಾದ ಚೈತ್ರಾ ಎಸ್ ಕೋಷ್ಠಿ ಮತ್ತು ವಿಜಯಲಕ್ಷ್ಮೀ ಎಂ.ಲಮಾಣಿ ಶೇ. 97.28 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭಾಗ್ಯಲಕ್ಷ್ಮೀ ಡಿ.ಭಜಕ್ಕನವರ (ಶೇ 96.96) ದ್ವಿತೀಯ ಹಾಗೂ ಸರೋಜಾ ಡೊಕ್ಕಣ್ಣವರ ಶೇ. (96.80) ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಅಧಿಕಾರಿ ವರ್ಗದವರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಾಚಾರ್ಯರಾದ ಡಿ.ಸಿ. ನರೇಗಲ್ಲ ತಿಳಿಸಿದ್ದಾರೆ.