ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ರಾಜೀವಗಾಂಧಿ ಮಹಾವಿದ್ಯಾಲಯದ 2023-24ನೇ ಸಾಲಿನ ಬಿಇಡಿ ಫಲಿತಾಂಶ ಪ್ರಕಟಗೊಂಡಿದ್ದು, ಕಾಲೇಜಿನ ಪ್ರತಿಭಾ ತಿಮ್ಮಣಗೌಡ್ರ ಶೇ.91.04 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ, ಅನಿಲ ಹಿರೇಗೌಡ್ರ ಶೇ.91.00 ಅಂಕಗಳನ್ನು ಗಳಿಸಿ ದ್ವಿತೀಯ, ಈರಮ್ಮ ಗಾಣಿಗೇರ ಶೇ.90.08 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದು, ಕಾಲೇಜು ಶೇ.100ರಷ್ಟು ಪ್ರಗತಿಯನ್ನು ಸಾಧಿಸಿದೆ.
Advertisement
ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ, ಸಂಗನಗೌಡ ಪಾಟೀಲ, ಪ್ರಾಚಾರ್ಯ ವಾಯ್.ಎನ್. ಪಾಪಣ್ಣವರ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರು, ಶಿಕ್ಷಕರು, ಸಿಬ್ಬಂದಿಗಳು ಪ್ರಶಿಕ್ಷಣಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.