ಚನ್ನಮ್ಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ವೀರರಾಣಿ ಚನ್ನಮ್ಮ ಬಾಲಕಿಯರ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿದ್ದು ಪರೀಕ್ಷೆಗೆ ಹಾಜರಾದ ಎಲ್ಲ 65 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Advertisement

ಕಾವ್ಯಾ ಬಾಬಜಿ ಶೇ. 96.80 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದು, ಪ್ರಿಯಾಂಕಾ ಪಾಗದ ಶೇ. 95.68 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಲಲಿತಾ ಕದಂ ಶೇ. 95.52 ಅಂಕ ಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಜಿ.ಎಸ್. ಪಾಟೀಲ, ಆಡಳಿತಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here