ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆಎಲ್‌ಇ ಸಂಸ್ಥೆಯ ಸಿಬಿಎಸ್‌ಇ ಶಾಲೆಯು ಶೇಕಡಾ ನೂರರ ಫಲಿತಾಂಶದ ಗರಿಯನ್ನು ದಾಖಲಿಸಿದೆ.
2024-25ನೇ ಶೈಕ್ಷಣಿಕ ವರ್ಷದ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ನವದೆಹಲಿ ವತಿಯಿಂದ ನಡೆದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ವೈಯಕ್ತಿಕ ಫಲಿತಾಂಶದಲ್ಲಿ ಪರಮ್ ಜಿ.ಎಂ ಶೇ. 95 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ರಶ್ಮಿ ಚಂದ್ರಶೇಖರ ತಡಸದ ಶೇ. 94.80 ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಸಿಂಚನಾ ಅಸೂಟಿ ಶೇ. 94.40 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ 12 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯಾಧ್ಯಕ್ಷರು, ಚೇರಮನ್ನರು, ನಿರ್ದೇಶಕರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.



