ಬೆಂಗಳೂರು:- ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಸಮ್ಮುಖದಲ್ಲಿ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಬೆಂಗಳೂರಲ್ಲಿ ಶರಣಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಇದೀಗ ಮುಖ್ಯವಾಹಿನಿಗೆ ಬಂದಿದ್ದಾರೆ. ಆರು ನಕ್ಸಲರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸಿಎಂ, ಸಂವಿಧಾನದ ಪುಸ್ತಕ ನೀಡಿದರು.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ವೇಳೆ ಡಿಜಿ ಐಜಿಪಿ ಅಲೋಕ್ ಮೋಹನ್, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.
ಇನ್ನು ತಮ್ಮ ಸಮ್ಮುಖದಲ್ಲೇ ಮುಖ್ಯವಾಹಿನಿ ಬಂದಿರುವ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಬಗ್ಗೆ ಚರ್ಚಿಸಿದ್ದಾರೆ.