ಬಳ್ಳಾರಿ: ಬೈಕ್ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಮಲಾಪುರದ ಕೃಷ್ಣ (26) ಮತ್ತು ವೆಂಕಟಾಪುರದ ಹನುಮಂತಪ್ಪ (50) ಎಂದು ಗುರುತಿಸಲಾಗಿದೆ. ಇವರು ಹೊರಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ವಾಚರ್ಸ್ ಆಗಿ ಕೆಲಸ ಮಾಡುತ್ತಿದ್ದರು.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೈಕ್ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಪರಾರಿಯಾಗಲು ಯತ್ನಿಸಿದ ಬುಲೇರೋ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸ್ಥಳಕ್ಕೆ ರಾಜೇಶ್ ಭಟಗುರ್ಕಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



