ಹಾಸನ: ಆಕ್ಸೆಲ್ ತುಂಡಾಗಿ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಕಲ್ಲಂಗಡಿ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಸಿದ್ಧಾಪುರ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.
Advertisement
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಂತೆಗೆ ವ್ಯಾಪಾರ ಮಾಡಲು ಗೂಡ್ಸ್ ವಾಹನದಲ್ಲಿ ಕಲ್ಲಂಗಡಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆಕ್ಸಲ್ ತುಂಡಾಗಿ ಗೂಡ್ಸ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಕಲ್ಲಂಗಡಿ ಹಣ್ಣುಗಳು ಮಣ್ಣುಪಾಲಾದ್ದನ್ನು ಕಂಡು ರೈತ ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.