ವಿಜಯಸಾಕ್ಷಿ ಸುದ್ದಿ, ಮುಂಡರಗಿ
Advertisement
ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾದ ಕಾರಣ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಜರುಗಿದೆ.
ಮುಂಡರಗಿ ತಾಲೂಕಿನ ಬಾಗೇವಾಡಿ ಬಳಿ ಈ ಘಟನೆ ಜರುಗಿದ್ದು, ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿ ಬಸ್‌ನ ಮುಂದಿನ ಗಾಜು ಹೊಡೆದು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ.
ಬಸ್‌ನ ಪಾಟಾ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ನಡೆದಿದೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮುಂಡರಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.