ಶಿವಮೊಗ್ಗ:ಕಳೆದ 40 ದಿನಗಳಲ್ಲಿ ಇವತ್ತಿನವರೆಗೆ ಹಾಸನದಲ್ಲಿ ಸಾಕಷ್ಟು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರಿ ವೈದ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ.
Advertisement
ವೈದ್ಯ ಡಾ. ಎನ್. ಸಂದೀಪ್ (48) ಮೃತ ದುರ್ಧೈವಿಯಾಗಿದ್ದು, ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಹೊರವಲಯದ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಡಾ.ಸಂದೀಪ್ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಮೂಲದವರು. ಶಿವಮೊಗ್ಗ ಹೊರವಲಯ ಪುರಲೆಯಲ್ಲಿ ಮನೆ ಮಾಡಿಕೊಂಡಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.