ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ!

0
Spread the love

ಬೆಳಗಾವಿ: ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಸೀಲ್ದಾರ್ ಆಫೀಸ್‌ನಲ್ಲಿ ಎಸ್ ಡಿಎ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್‌ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.

Advertisement

ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್‌ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್‌ ಕೂಡ ಹಾಕಿದ್ದರು.ಇನ್ನೂ ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗುವ ಮುನ್ನ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನ ಹೆಸರು ಬರೆದಿಟ್ಟಿದ್ದಾರೆ.

ಬೆಳಗಾವಿಯ ತಹಶಿಲ್ದಾರ್ ಬಸವರಾಜ್ ನಾಗರಾಳ‌ ಚೇಂಬರ್‌ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್‌ಡಿಸಿ ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್, ಖಡೇಬಜಾರ್ ಪೊಲೀಸರ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here