ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಟನ್ ಕಬ್ಬಿಗೆ 3300 ನಿಗದಿ

0
Spread the love

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹೌದು ಇಂದು ಸರಣಿ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್‌ನ ಸಚಿವರುಗಳು ಈ ತೀರ್ಮಾನ ಪ್ರಕಟಿಸಿದ್ದಾರೆ.

Advertisement

ಕಬ್ಬಿನ 11.25 ರಿಕವರಿಗೆ ಪ್ರತಿ ಟನ್‌ಗೆ  3250 ರೂಪಾಯಿಯನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಲಿವೆ. ಇದಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 50 ರೂಪಾಯಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಅಂತಿಮವಾಗಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ಗೆ 3,300 ರೂಪಾಯಿ ಹಣ ಸಿಗಲಿದೆ.

ಮೊದಲು ಕಾರ್ಖಾನೆ ಮಾಲೀಕರು ₹3,200 ನೀಡಲು ಒಪ್ಪಿಕೊಂಡಿದ್ದರು. ಆದರೆ, ರೈತರು ಇದನ್ನು ತಿರಸ್ಕರಿಸಿ ಹೋರಾಟ ಮುಂದುವರಿಸಿದ್ದರು. ಎರಡನೇ ಸುತ್ತಿನ ಸಭೆಯಲ್ಲಿ ಸಿಎಂ ಅವರು ₹3,300ಕ್ಕೆ ಒಪ್ಪಿಸಲು ಯಶಸ್ವಿಯಾಗಿದ್ದಾರೆ.

ಕಬ್ಬು ಬೆಳೆಗಾರರು ಪ್ರತಿ ಟನ್‌ಗೆ ₹3,500 ಬೆಂಬಲ ಬೆಲೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದರು. ಮಂಡ್ಯ, ಮೈಸೂರು, ಬೆಳಗಾವಿ, ಬಾಗಲಕೋಟೆ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ, ಧರಣಿ, ಟೈಯರ್ ಸುಡುವುದು, ಪೊಲೀಸರೊಂದಿಗೆ ಘರ್ಷಣೆಗಳು ನಡೆದಿದ್ದವು. ಬೆಳಗಾವಿಯಲ್ಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿ, ಸಾರ್ವಜನಿಕ ಆಸ್ತಿಗೆ ಹಾನಿ, ವಾಹನಗಳಿಗೆ ಬೆಂಕಿ ಹಚ್ಚುವ ಘಟನೆಗಳು ನಡೆದಿದ್ದವು. ಇದರಿಂದ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿತ್ತು.


Spread the love

LEAVE A REPLY

Please enter your comment!
Please enter your name here