ಬೆಂಗಳೂರು:- ಅರೆಕಾಲಿಕ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.
ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ ಶಾಲೆಯ, ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಿಗೆ ₹7,500-10,000 ರೂ. ಕನಿಷ್ಠ ವೇತನ ನಿಗದಿ ಮಾಡಿದೆ.
ಇನ್ನು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕರ ವೇತನ ₹10,000-15,000 ರೂ. ಹೆಚ್ಚಿಸಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳ ಅರೆಕಾಲಿಕ ಉಪನ್ಯಾಸಕರುಗಳಿಗೆ ಮಾಸಿಕ ಸಂಭಾವನೆಯನ್ನು ಕ್ರಮವಾಗಿ 7,500 ದಿಂದ 10,000 ರೂ. ಹೆಚ್ಚಿಸಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವ ಧನವನ್ನು 7.500 ರಿಂದ 12.500 ರೂ. ಹಾಗೂ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರುಗಳ ಮಾಸಿಕ ಗೌರವ ಧನವನ್ನು 10,000 ಗಳಿಂದ 15,000 ರೂ. ಹೆಚ್ಚಿಸಲಾಗಿದೆ.