ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಜನರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ!

0
Spread the love

ಬೆಂಗಳೂರು: ಯಲ್ಲಾಪುರ ಹಾಗೂ ಸಿಂಧನೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಿಎಂ ಸಿದ್ದರಾಮಯ್ಯ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಹೌದು ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರು ಅಪಘಾತಗಳಲ್ಲಿ 14 ಜನ ಮೃತಪಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದರು.

Advertisement

ಇದೀಗ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ, ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.

ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here