HomeKarnataka Newsಪೌರ ಕಾರ್ಮಿಕರ ಬೇಡಿಕೆ ನಿರ್ಲಕ್ಷಿಸಿದ ಸರ್ಕಾರ: ರಾಜ್ಯಾಧ್ಯಕ್ಷ ಕೆ. ಪ್ರಭಾಕರ್ ಆಕ್ರೋಶ

ಪೌರ ಕಾರ್ಮಿಕರ ಬೇಡಿಕೆ ನಿರ್ಲಕ್ಷಿಸಿದ ಸರ್ಕಾರ: ರಾಜ್ಯಾಧ್ಯಕ್ಷ ಕೆ. ಪ್ರಭಾಕರ್ ಆಕ್ರೋಶ

For Dai;y Updates Join Our whatsapp Group

Spread the love

ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಪೌರ ನೌಕರರ ಬೇಡಿಕೆಗಳಲ್ಲಿ ಕನಿಷ್ಠ ಒಂದನ್ನಾದರೂ ಈಡೇರಿಸದೇ ನಿರ್ಲಕ್ಷ್ಯ ತೋರಲಾಗಿದೆ ಎಂದು ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಸಾಕ್ಷಿಯೊಂದಿಗೆ ಮಾತನಾಡಿದ ಅವರು, ಪೌರ ಕಾರ್ಮಿಕರ ವೇತನ ಹೆಚ್ಚಳ, ಶಾಶ್ವತ ನೇಮಕಾತಿ, ಸುರಕ್ಷತಾ ಸೌಲಭ್ಯಗಳು ಹಾಗೂ ವಿವಿಧ ಮೂಲಭೂತ ಸೌಲಭ್ಯಗಳ ಕುರಿತು ಹಲವಾರು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.

ನಗರಗಳ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವ ಮಹತ್ವದ ಕೆಲಸವನ್ನು ಪೌರ ಕಾರ್ಮಿಕರು ನಿರಂತರವಾಗಿ ನಿರ್ವಹಿಸುತ್ತಿದ್ದಾರೆ. ಇಂತಹ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗದಿರುವುದು ವಿಷಾದನೀಯವಾಗಿದೆ ಎಂದು ಹೇಳಿದರು.

ಇದೇ ಮಾರ್ಚ್ 9ರಂದು ರಾಜ್ಯ ಕಾರ್ಯಕಾರಿ ಸಭೆ ಕರೆಯಲಾಗಿದ್ದು, ಪೌರ ನೌಕರರ ಮೇಲಿನ ನಿರ್ಲಕ್ಷ್ಯ ಧೋರಣೆಗೆ ವಿರೋಧವಾಗಿ ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆ. ಪ್ರಭಾಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಬೆಳ್ಳಕ್ಕಿ ಮಾರುತಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಕಡ್ಲೆಪ್ಪ ಹಾಗೂ ನಿರ್ದೇಶಕ ಸಂತೋಷ್ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!