ದ್ವೇಷ ಭಾವನೆ ಹಬ್ಬಿಸುವ ಕೆಲಸಕ್ಕೆ ಸರ್ಕಾರದ ರಕ್ಷಣೆ ನೀಡುತ್ತಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ

0
Spread the love

ಚಿತ್ರದುರ್ಗ: ಡಿಸಿಎಂ ಡಿಕೆ ಶಿವಕುಮಾರ್‌ಗೆ ನಾಳೆಯೇ ಸಿಎಂ ಆಗಬೇಕೆಂಬ ತವಕವಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಚಿತ್ರದುರ್ಗದ ಕೊಳಾಳ್ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ 2 ದಿನ ಇರ್ತೀನೋ ಬಿಡ್ತೀನೋ ಎಂಬ ಭಾವವಿದೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ ಯಾರಾಗಬೇಕೆಂಬ ಸ್ಪರ್ಧೆ ನಡೆಯುತ್ತಿದ್ದು, ಅಧಿಕಾರದ ದಾಹ ಹೆಚ್ಚಾಗಿದೆ.

Advertisement

ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದ್ದು, ಈ ಸರ್ಕಾರಕ್ಕೆ ಜನರ ಹಿತ ಕಾಪಾಡುವಲ್ಲಿ ಕಾಳಜಿಯೇ ಕಾಣುತ್ತಿಲ್ಲ ಎಂದು ಆರೋಪಿಸಿದರು. ಕಾವೇರಿ ನೀರು ಈಗಲೂ ತಮಿಳುನಾಡಿಗೆ ಹರಿಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಶಿವಮೊಗ್ಗ, ಕೋಲಾರದಲ್ಲಿ ಖಡ್ಗ ಹಿಡಿದು ಟಿಪ್ಪು ಮೆರವಣಿಗೆ ನಡೆದಿದ್ದು, ಕೋಮು ಭಾವನೆ ಕೆರಳಿಸುವ ಮತ್ತು ದ್ವೇಷ ಭಾವನೆ ಹಬ್ಬಿಸುವ ಕೆಲಸಕ್ಕೆ ಸರ್ಕಾರದ ರಕ್ಷಣೆ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.


Spread the love

LEAVE A REPLY

Please enter your comment!
Please enter your name here