ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.
ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿತು. ಇಂತಹ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ್ ಜೋಶಿ ತಮ್ಮ `ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.



