ಸರ್ಕಾರಿ ಇಲಾಖೆಗಳ ನಾಮಫಲಕ ಕನ್ನಡ ಕಡ್ಡಾಯಗೊಳಿಸಿ ಸರ್ಕಾರ ಆದೇಶ!

0
Spread the love

ಬೆಂಗಳೂರು:- ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಆದೇಶ ಹೊರಡಿಸಿದೆ.

Advertisement

ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯ ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here