ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲು ಸರ್ಕಾರ ಆದೇಶ

0
Spread the love

ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇಂದು ಚಿತ್ರಮಂದಿರಗಳ ಕಡೆ ಹೋಗುವ ಜನರ ಸಂಖ್ಯೆ ತೀರಾ ಕಡಿಮೆಯಾಗಿದೆ. ಇದರಿಂದ ಸಾಕಷ್ಟು ಜನರಿಗೆ ಹೊಡೆತ ಬಿದಿದ್ದು ಈಗಾಲಗೇ ಹಲವು ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಪರಭಾಷೆಯ ಸಿನಿಮಾಗಳು ಮಾತ್ರ ಕೋಟಿ ಕೋಟಿ ಹಣ ಮಾಡಿಕೊಳ್ಳುತ್ತಿವೆ, ಆದರೆ ಕನ್ನಡ ಸಿನಿಮಾಗಳಿಗೆ ಪ್ರೇಕ್ಷಕರೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈಗ ಎಲ್ಲಾ ಭಾಷೆಗಳಿಗೂ ಸೇರಿದಂತೆ ಏಕರೂಪ ದರ ಫಿಕ್ಸ್ ಮಾಡಿ ಸರ್ಕಾರ ಆದೇಶಿಸಿದೆ.

ಕರ್ನಾಟಕ ಸಿನಿಮಾಸ್ (ನಿಯಂತ್ರಣ) ನಿಯಮಗಳು, 2014 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಈ ಕೆಳಗಿನ ನಿಯಮಗಳ ಕರಡನ್ನು, ಕರ್ನಾಟಕ ಸಿನಿಮಾಸ್ (ನಿಯಂತ್ರಣ) ಕಾಯ್ದೆ, 1964 (ಕರ್ನಾಟಕ ಕಾಯ್ದೆ 23, 1964) ರ ಸೆಕ್ಷನ್ 19 ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಲು ಪ್ರಸ್ತಾಪಿಸಲಾಗಿದೆ. ಈ ಕರಡನ್ನು, ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ವಿಭಾಗದ ಉಪವಿಭಾಗ (1) ರ ಪ್ರಕಾರ ಇಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ 15 (ಹದಿನೈದು ದಿನಗಳು) ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here