ಅರಣ್ಯದಲ್ಲಿ ಶೂಟಿಂಗ್ ತೆಗೆಯಲು ಇನ್ಮುಂದೆ ಬೇಕು ಸರ್ಕಾರದ ಪರ್ಮೀಷನ್!

0
Spread the love

ಬೆಂಗಳೂರು:- ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಎಂದು ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

Advertisement

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ.

ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಅರಣ್ಯ ಸಚಿವರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here