ಬೆಂಗಳೂರು: ಮೀನುಗಾರಿಕೆ ಕ್ಷೇತ್ರವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮೀನುಗಾರಿಕೆ ಇಲಾಖೆ ಆಯೋಜಿಸಿದ “ವಿಶ್ವ ಮೀನುಗಾರಿಕೆ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 320 ಕಿ.ಮೀ. ಕರಾವಳಿ ಪ್ರದೇಶ ಮತ್ತು 5.5 ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶವಿದೆ. ರಾಜ್ಯ ಮೀನು ರಫ್ತಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ದೇಶದ ಮೀನು ಉತ್ಪಾದನೆಯಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಮೀನುಗಾರಿಕೆ 10 ಲಕ್ಷ ಜನರ ಜೀವನದ ಆಧಾರವಾಗಿದೆ.
ಸರ್ಕಾರ ನೇತೃತ್ವದಲ್ಲಿ ಯಾಂತ್ರೀಕೃತ ದೋಣಿಗಳ ಡೀಸೆಲ್ ಮಿತಿಯನ್ನು ವಾರ್ಷಿಕ 1.5 ಲಕ್ಷ ಲೀಟರ್‌ನಿಂದ 2 ಲಕ್ಷ ಲೀಟರ್‌ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಎಣ್ಣೆ ಪ್ರತೀ ಲೀಟರ್‌ಗೆ 35 ರೂ. ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತಿ ಬಜೆಟ್‌ನಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಮುದಾಯದ ಅಭಿವೃದ್ಧಿಗೆ ತೊಡಗಿರುವುದಾಗಿ ತಿಳಿಸಿದ್ದಾರೆ.


