ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸುಗ್ರೀವಾಜ್ಞೆ ಹೊರಡಿಸಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
Advertisement
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಸಾಲಗಾರರಿಗೆ ನೀಡುವ ಕಿರುಕುಳ ನಿಲ್ಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ,
ಎಲ್ಲ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಹ ಸರ್ಕಾರ ಸಿದ್ಧವಾಗಿದೆ ಮತ್ತು ಅದರ ಕರುಡನ್ನು ತಯಾರು ಮಾಡಲು ಇವತ್ತು ಸಭೆಯೊಂದನ್ನು ಕರೆಯಲಾಗಿದೆ, ಕರಡು ತಯಾರಾದ ಕೂಡಲೇ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.