ರಾಜಸ್ಥಾನ:– ಸರ್ಕಾರಿ ಶಾಲೆಯ ಕಟ್ಟಡ ಕುಸಿದು ನಾಲ್ಕು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲವರ್ ಜಿಲ್ಲೆಯಲ್ಲಿ ಜರುಗಿದೆ.
ಘಟನೆಯಲ್ಲಿ 17 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೋಹರ್ ಥನ ಬಳಿಯ ಪಿಪ್ಲೋಡಿ ಸರ್ಕಾರಿ ಶಾಲೆಯ ಕಟ್ಟಡವು ಇಂದು ಬೆಳಗ್ಗೆ 8.30 ರ ಸುಮಾರಿಗೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಶಾಲೆಯಲ್ಲಿ ಸುಮಾರು 40 ಮಕ್ಕಳಿದ್ದರು. ಜೊತೆಗೆ ಶಿಕ್ಷಕರು ಹಾಗೂ ಸಿಬ್ಬಂದಿ ಸಹ ಇದ್ದರು.
ಬಿಲ್ಡಿಂಗ್ ಮೊದಲೇ ಶಿಥಿಲಾವಸ್ಥೆಯಲ್ಲಿತ್ತು. ಈ ಬಗ್ಗೆ ಅನೇಕ ಬಾರಿ ದೂರುಗಳನ್ನು ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನ ಆಗಿರಲಿಲ್ಲ. ಅದೇ ಬಿಲ್ಡಿಂಗ್ನಲ್ಲಿ 8ನೇ ತರಗತಿ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿತ್ತು.
ದುರಂತ ಸ್ಥಳಕ್ಕೆ ಎಸ್ಪಿ ಅಮಿತ್ ಕುಮಾರ್ ಭೇಟಿ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಪ್ರಕಾರ, 4 ಮಕ್ಕಳು ಜೀವ ಕಳೆದುಕೊಂಡಿದ್ದಾರೆ. 17 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.