ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇದೀಗ ನಿರಂತರ ಮಳೆಗೆ ಶಾಲಾ ಕಟ್ಟಡ ಕುಸಿತಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ದೇಮಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
Advertisement
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಕೊಠಡಿ ಧರೆಗೆ ಉರುಳಿದ್ದು, ಬೆಳಗಿನ ಜಾವ ಶಾಲಾ ಕಟ್ಟಡ ಬಿದ್ದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ.
ಶಾಲಾ ಗೋಡೆ ಕುಸಿತಗೊಂಡ ಹಿನ್ನೆಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಗಮನ ಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.