HomePolitics Newsಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ.

ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ.

ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು. ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!