HomeKarnataka Newsಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿ ಗೊಳಿಸುವ ಕನಸನ್ನು ನನಸು ಮಾಡಲಿದೆ

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!