ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಿಸಲಾಗಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ.
ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿವೆ. ಈ ನಡುವೆ ಬಿಜೆಪಿಯೊಳಗಿನ ಬಣಬೇಧವೂ ಆರಂಭವಾಗಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಇಂತಹ ರಾಜಕೀಯ ಪರಿಸ್ಥಿತಿಯ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದು ಚುನಾವಣಾ ರಾಜಕೀಯದ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದು ಫಲಿತಾಂಶದ ನಂತರವೇ ಸ್ಪಷ್ಟವಾಗಲಿದೆ.
ಕಾಂಗ್ರೆಸಿನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಈ ಕ್ಷೇತ್ರ ಖಾಲಿಯಾಗಿದ್ದು, ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ ಗೆಲುವು ಸಾಧಿಸಿಲ್ಲ. ಬಹುಪಾಲು ಸಮಯ ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸುತ್ತಿದ್ದರು.



