HomeKarnataka News2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಸಂಕಲ್ಪ: ಡಿ.ಕೆ. ಶಿವಕುಮಾರ್

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಸಂಕಲ್ಪ: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: 2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.

“ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ” ಎಂದು ತಿಳಿಸಿದರು.

“ಈ ಯೋಜನೆಯಲ್ಲಿ ಮಾರ್ಪಾಟು ಮಾಡಿರುವ ಅಂಶಗಳು, ಸಚಿವರುಗಳ ಸಲಹೆಗಳನ್ನು ನೀಡಿದ್ದಾರೆ. ಇಲ್ಲಿ ಕೆಲವು ತಾಂತ್ರಿಕ ಅಂಶಗಳು ಕೂಡ ಇವೆ. ಎಲ್ಲವನ್ನು ಅಧ್ಯಯನ ಮಾಡಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಬೇರೆ ಯೋಜನೆಗಳು ವಿಳಂಬವಾದರೂ ಚಿಂತೆಯಿಲ್ಲ, ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ” ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!