ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಒಪ್ಪಿಗೆ: ದಿಢೀರ್ ಕರೆದ ಸಚಿವ ಸಂಪುಟ ಸಭೆ ರದ್ದು

0
Spread the love

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ವಿಶೇಷ ಸಭೆ ಕರೆಯಲಾಗಿತ್ತು. ಆದ್ರೆ ಕೆಲವು ಕಾರಣಗಳಿಂದ ವಿಶೇಷ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದೆ. ಸಂಜೆ 5 ಗಂಟೆಗೆ ನಿಗದಿಯಾಗಿದ್ದ ಸಂಪುಟ ಸಭೆ ರದ್ದಾಗಿದೆ.

Advertisement

ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಗೃಹ ಕಛೇರಿ ಕೃಷ್ಣಾದಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳು ಸರಣಿ ಸಭೆಯನ್ನು ನಡೆಸಿ ಚರ್ಚೆ ನಡೆಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಭೈರತಿ ಸುರೇಶ್ ಸೇರಿದಂತೆ ಹಲವು ಸಚಿವರು ಗೃಹ ಕಛೇರಿಗೆ ಆಗಮಿಸಿ ಇದು ಪ್ರತಿಪಕ್ಷಗಳ ಷಡ್ಯಂತ್ರವಾಗಿದ್ದು, ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯಗೆ ಭರವಸೆ ನೀಡುತ್ತಿದ್ದರು.


Spread the love

LEAVE A REPLY

Please enter your comment!
Please enter your name here