ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ!

0
Spread the love

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

Advertisement

ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಮೈಸೂರಿನ ಮೂಡಾ ಹಗರಣ ಇದೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು ವಿಪಕ್ಷಗಳ ಬಾಯಿಗೂ ಎಲೆ ಅಡಿಕೆಯಾಗಿಬಿಟ್ಟಿದೆ. ಸೈಟ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಸಹ ಕೇಳಿ ಬಂದಿದ್ದು, ಒಂದಿಲ್ಲೊಂದು ರೀತಿಯಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here