ಬೆಂಗಳೂರು:- ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ಧ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ ಎಂದರು.
ಇನ್ನೆರಡು ಮೂರು ದಿನಗಳಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.