ಉಡುಪಿ: ಯಾವ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಸರ್ಕಾರ ಬಿಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ಯಾವ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಸರ್ಕಾರ ಬಿಡಲ್ಲ. ರದ್ದಾಗಿರುವವರ ಪಟ್ಟಿ ಮಾಡಲಾಗುತ್ತಿದೆ. ಅರ್ಹರಿಗೆ ಮರು ಅರ್ಜಿ ಹಾಕಿ ಸರಿ ಮಾಡಲಾಗುತ್ತದೆ. ಗ್ಯಾರಂಟಿ ಯೋಜನೆ ಜಾರಿಗೆ ಸಮಿತಿ ಇದೆ. ಅದರ ನೆರವಿನೊಂದಿಗೆ ಅರ್ಹರಿಗೆ ಕಾರ್ಡ್ ಮತ್ತೆ ನೀಡುತ್ತೇವೆ. ಬಡವರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರ ಇರುವ ತನಕ ಗ್ಯಾರಂಟಿ ಯೋಜನೆಗಳು ಇರುತ್ತವೆ. ಮುಂದಿನ ಮೂರು ವರ್ಷ ಆ ಬಳಿಕ 5 ವರ್ಷ ನಾವು ಅಧಿಕಾರದಲ್ಲಿ ಇರುತ್ತೆ. ಮುಂದಿನ 8 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ರದ್ದಾಗಲ್ಲ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಈ ಹಿಂದೆ ಎಕ್ಸಿಟ್ ಪೋಲ್‌ಗಳ ಸಮೀಕ್ಷೆಗಳು ಸುಳ್ಳಾಗಿವೆ. ಅದೇ ರೀತಿ ಉಪ ಚುನಾವಣೆ ಸಮೀಕ್ಷೆ ಸುಳ್ಳಾಗಲಿವೆ ಎಂದು ಡಿಕೆಶಿ ಹೇಳಿದರು.