‘ಗ್ರಹಣ’ ನಿರ್ಮಾಪಕ ಶಿವರಾಮ್ ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಡಳ್ಳಿ ಶಿವರಾಮ್ ನಿಧನ ಹೊಂದಿರುವುದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ.
Advertisement
1978ರಲ್ಲಿ ‘ಗ್ರಹಣ’ ಹೆಸರಿನ ಸಿನಿಮಾ ಬಂತು. ಈ ಚಿತ್ರಕ್ಕೆ ಕಥೆ ಬರೆದಿದ್ದು ಕೋಡಳ್ಳಿ ಶಿವರಾಮ್ ಅವರು. ಈ ಚಿತ್ರವನ್ನು ಟಿಎಸ್ ನಾಗಾಭರಣ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಕೋಡಳ್ಳಿ ಶಿವರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಕೋಡಳ್ಳಿ ಶಿವರಾಮ್ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.