ಗ್ರಾಮ ಪಂಚಾಯಿತಿ ಸದಸ್ಯನ ಗೂಂಡಾವರ್ತನೆ: ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಸೆಲೆಬ್ರೇಟ್!

0
Spread the love

ಬೆಳಗಾವಿ:- ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯಿತಿ ಸದಸ್ಯನೋರ್ವ ಬರ್ತಡೇ ಸೆಲೆಬ್ರೇಟ್ ಮಾಡಿರುವ ಘಟನೆ ಜರುಗಿದೆ.

Advertisement

ಎರಡು ದಿನಗಳ‌ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ನನ್ನು ಬಂಧಿಸಿದ್ದಾರೆ.

ನಗರದಲ್ಲಿ ಎರಡು ದಿನಗಳ‌ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಡೋಂಟ್​ಕೇರ್. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್​ರನ್ನು ಪೊಲೀಸರು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here