15 ವರ್ಷದ ಬಾಲಕಿಯನ್ನೇ ವಿವಾಹವಾದ ಗ್ರಾಮ ಪಂಚಾಯತ್ ಅಧ್ಯಕ್ಷ..!

0
Spread the love

ಬೆಳಗಾವಿ: 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಗ್ರಾಮ ‌ಪಂಚಾಯಿತಿ ಅಧ್ಯಕ್ಷ ಮದುವೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ಮದುವೆಯಾಗಿದ್ದನು.

Advertisement

ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದನು. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ. ಜಿಲ್ಲಾ ‌ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪುರಕ್ಕೆ ಭೇಟಿ ನೀಡಿದೆ. ಆದರೂ, ಬಾಲಕಿ ಪತ್ತೆಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ದಾಖಲೆಯನ್ನು ಅಧ್ಯಕ್ಷ ಬಿಡುಗಡೆ ಮಾಡಿದ್ದನು.

ಅಧ್ಯಕ್ಷ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಶಾಲಾ‌ ಟ್ರಾನ್ಸ್‌ಫರ್ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ‌ದಾಖಲೆ‌ ಹೋಲಿಕೆ ಮಾಡಿದ ಅಧಿಕಾರಿಗಳು‌, ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿದೆ. ಕೃತ್ಯ‌ ಎಸಗಿರುವುದು ದೃಢವಾದ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here