ವಿಜಯಸಾಕ್ಷಿ ಸುದ್ದಿ, ಕುರ್ತಕೋಟಿ
Advertisement
ಗ್ರಾಮ ಪಂಚಾಯತಿ ಮಾಜಿ ಸದಸ್ಯ, ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ತಿಪ್ಪಣ್ಣ ರವಳೋಜಿ (48) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸಹೋದರ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು.
ಸಂತಾಪ: ಯಲ್ಲಪ್ಪ ರವಳೋಜಿ ಅವರ ನಿಧನಕ್ಕೆ ಮಾಜಿ ಸಚಿವ, ಗದಗ ಶಾಸಕ ಎಚ್. ಕೆ ಪಾಟೀಲ, ಮಾಜಿ ಶಾಸಕರಾದ ಡಿ. ಆರ್ ಪಾಟೀಲ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಅಪ್ಪಣ್ಣ ಇನಾಮತಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.