ಗೃಹಲಕ್ಷ್ಮಿ ಯೋಜನೆ ಹಣದಿಂದ ಹೋಳಿಗೆ ಊಟ ಹಾಕಿದ ಅಜ್ಜಿ!

0
Spread the love

ಬೆಳಗಾವಿ: ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಂಚ ಯೋಜನೆಗಳನ್ನು ಘೋಷಿಸಿತ್ತು. ಈ ಪಂಚ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಿತ್ತು.

Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದರು.

ಈಗಾಗಲೇ 10 ತಿಂಗಳಿಂದ ಮಾಸಿಕ 2000 ರೂಪಾಯಿ ಹಣ ಫಲಾನುಭವಿಗಳಿಗೆ ಸಿಗುತ್ತಿದೆ. ಈ ಹಣದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ತಮ್ಮ ಹಳ್ಳಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಇವರಿಗೆ ಅದೇ ಗ್ರಾಮದ ಇನ್ನಷ್ಟು ವೃದ್ಧೆಯರು ಸಹಕಾರ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಪ್ರತಿ ತಿಂಗಳು ನಮಗೆಲ್ಲಾ 2,000 ರೂಪಾಯಿ ನೀಡ್ತಿದ್ದಾರೆ. ಈಗಾಗಲೇ 10 ತಿಂಗಳ ಹಣ ಬಂದಿದೆ. ಸಿದ್ದರಾಮಯ್ಯ ರಾಜ್ಯಕ್ಕೆ ಒಳ್ಳೆಯದು ಮಾಡುತ್ತಿದ್ದಾರೆ. ಎಲ್ಲರಿಗೂ ಅನ್ನ ಹಾಕುತ್ತಿದ್ದಾರೆ.

ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ, ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿದ್ದೇನೆ. 5 ಮುತ್ತೈದೆಯರಿಗೆ ಉಡಿ ತುಂಬಿಸಿ ಊರಿಗೆ ಹೋಳಿಗೆ ಊಟ ಹಾಕಿಸುತ್ತಿದ್ದೇವೆ ” ಎನ್ನುತ್ತಾರೆ ಅಜ್ಜಿ ಅಕ್ಕಾತಾಯಿ ಲಂಗೋಟಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here