ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: 10 ಸಾವು ಶಂಕೆ, ಹಲವರು ಗಂಭೀರ!

0
Spread the love

ಪ್ರಯಾಗರಾಜ್:- ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ತಡರಾತ್ರಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಹಲವರು ಗಂಭೀರ ಗಾಯಗೊಂಡಿದ್ದಾರೆ.

Advertisement

ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಅಮೃತ ಸ್ನಾನ ಮಾಡಲು ಭಕ್ತರು ಸರದಿ ಸಾಲಿನಲ್ಲಿ ತೆರಳಿದ್ದಾರೆ. ಆದರೆ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ತಡೆಗೋಡೆಗಳನ್ನು ದಾಟಿ ಅಮೃತಸ್ನಾನಕ್ಕೆ ತೆರಳಿದ್ದಾರೆ, ಇದು ನೂಕು ನುಗ್ಗಲಿಗೆ ಕಾರಣವಾಗಿದೆ. ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದರೆ, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಆದರೆ ಸ್ಥಳದಲ್ಲಿರುವ ಮೂಲಗಳ ಮಾಹಿತಿಗಳ ಪ್ರಕಾರ ಯಾವುದೇ ಭಕ್ತರು ಮೃತಪಟ್ಟಿಲ್ಲ ಎಂದು ಹೇಳಲಾಗುತ್ತಿದೆ.

ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದ ಪರಿಸ್ಥಿತಿಯ ಮೇಲೆ ಕಣ್ಣಿರಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಒಂದು ಗಂಟೆಯಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.


Spread the love

LEAVE A REPLY

Please enter your comment!
Please enter your name here