ಬೆಂಗಳೂರು: ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ರೈತರಿಗೆ ಯಾವುದೇ ಹೊಸ ಯೋಜನೆ ನೀಡಲು ಸಾಧ್ಯವಾಗಿಲ್ಲ. ಮಹಿಳೆಯರಿಗೆ ಯಾವುದೇ ಅಭಿವೃದ್ಧಿ ಯೋಜನೆ ಪ್ರಕಟಿಸಿಲ್ಲ,
ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿ ಸ್ವಾಭಿಮಾನದ ಬದುಕನ್ನು ನೀಡಿಲ್ಲ. ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ. ಸ್ವಲ್ಪ ಮಳೆಯಾದರೂ ಬೆಂಗಳೂರು ಮಹಾನಗರ ನೀರಿನಲ್ಲಿ ಮುಳುಗುವಂತಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿಗಳು ನಾಳೆ ಎರಡು ವರ್ಷಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತ ಬಂದಿದ್ದೀರಿ. ರಾಜ್ಯದಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಸತತವಾಗಿ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.