ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿ‌ಕೊಟ್ಟ ಅತ್ತೆ!

0
Spread the love

ಹಾವೇರಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ನೂರಾರು ಮಹಿಳೆಯರಿಗೆ ಬಹಳಷ್ಟು ಅನುಕೂಲ ಮಾಡಿಕೊಟ್ಟಿದೆ. ಕೆಲ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಗೂ ಗ್ರಹಣ ಹಿಡಿದಿತ್ತು. ಆದ್ರೀಗ ಸರ್ಕಾರ ಮತ್ತೆ ಗೃಹಲಕ್ಷ್ಮಿಯರ ಖಾತೆಗೆ ಹಣ ಹಾಕಿದೆ. ಇದರಿಂದ ಮಹಿಳೆಯರು ಖುಷಿ ಆಗಿದ್ದು ಇದರ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ.

Advertisement

ಇತ್ತೀಚೆಗೆ ಬೆಳಗಾವಿಯಲ್ಲಿ ಅಜ್ಜಿಯೊಬ್ಬರು ತಾವು ಕೂಡಿಟ್ಟ ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿ ಊರ ಜನರ ಮನಸ್ಸು ಗೆದ್ದಿದ್ದರು. ಇದೀಗ ಗೃಹ ಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಸ್ಟೋರ್ ಹಾಕಿಸಿ‌ಕೊಟ್ಟಿದ್ದಾರೆ.

ಹೌದು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನೀರಲಗಿ ಗ್ರಾಮದಲ್ಲಿ ಗೃಹ ಲಕ್ಷ್ಮಿ ಹಣದಿಂದ ಪ್ಯಾನ್ಸಿ ಸ್ಟೋರ್ ಪ್ರಾರಂಭವಾಗಿದೆ. ಸೊಸೆ ಹೊರಗೆ ಕೆಲಸಕ್ಕೆ ಹೋಗಬಾರದು ಎಂದು ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ಇಟ್ಟುಕೊಟ್ಟ ಅತ್ತೆ ಕಾರ್ಯಕ್ಕೆ ಈಗ ಜನ ಶಹಬ್ಬಾಸ್ ಅಂತಿದ್ದಾರೆ. ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟಿದ್ದರು.

10 ಕಂತಿನ 20,000 ರೂಪಾಯಿ ಹಣ ಕೂಡಿಟ್ಟು ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ಗೆ ಫ್ಯಾನ್ಸಿ ಸ್ಟೋರ್ ಇಟ್ಟುಕೊಟ್ಟಿದ್ದಾರೆ. ಶ್ರಾವಣ ಮಂಗಳವಾರದ ಶುಭದಿನದಂದೇ ಫ್ಯಾನ್ಸಿ ಸ್ಟೋರ್‌ಗೆ ಪೂಜೆ ಮಾಡಿ ಚಾಲನೆ ನೀಡಿದರು. ಸಂಭ್ರಮದಿಂದ ಫ್ಯಾನ್ಸಿ ಸ್ಟೋರ್ ಶುರು ಮಾಡಿದ ಅತ್ತೆ-ಸೊಸೆ ಪರಸ್ಪರ ಭಾವುಕರಾದರು. ಸೊಸೆ ಮಗಳಿದ್ದಂಗೆ, ಅವಳು ಹೊರಗೆ ದುಡಿಯೋಕೆ ಹೋಗೋದು ಬೇಡ ಅಂತಾ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here