ಹಣ ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು ಎನ್‌ಸಿಪಿಐ ಲಿಂಕ್ ಮಾಡಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: 2 ಸಾವಿರ ರೂ. ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್‌ಲೈನ್ ಸೆಂಟರ್‌ಗಳಲ್ಲಿ ಎನ್‌ಸಿಪಿಐ ಲಿಂಕ್ ಮಾಡಿಸಬೇಕು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೃಹಲಕ್ಷ್ಮೀ ಫಲಾನುಭವಿಗಳಿಗೆ 2 ಸಾವಿರ ರೂ. ಬ್ಯಾಂಕ್ ಖಾತೆಗೆ ಜಮಾ ಆಗದೇ ಇದ್ದಲ್ಲಿ ತಮ್ಮ ಪಾಸ್‌ಬುಕ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ತೆಗೆದುಕೊಂಡು ತಮ್ಮ ಖಾತೆ ಇರುವ ಬ್ಯಾಂಕ್ ಇಲ್ಲವೇ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್‌ಲೈನ್ ಸೆಂಟರ್‌ಗಳಲ್ಲಿ ಎನ್‌ಸಿಪಿಐ ಲಿಂಕ್ ಮಾಡಿಸಬೇಕು.

ಮಾಹಿತಿಗಾಗಿ ಮುಳಗುಂದ ನಾಕಾ ಬಳಿಯ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗಿನ ಉಪವಿಭಾಗೀಯ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಪಂಚ ಗ್ಯಾಂರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಕಚೇರಿಗೆ ಕಚೇರಿ ಅವಧಿಯಲ್ಲಿ ಭೇಟಿ ನೀಡಬಹುದಾಗಿದೆ.

ಈಗಾಗಲೇ ಗದಗ ತಾಲೂಕಿನಾದ್ಯಂತ ಗೃಹಲಕ್ಷ್ಮೀ ಯೋಜನೆಯಡಿ ಮೇ 2025ರವರೆಗೆ 81,073 ನೋಂದಣಿಯಾದ ಅರ್ಜಿಗಳ ಪೈಕಿ 80,588 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ 99.4ರಷ್ಟು ಪ್ರಗತಿ ಸಾಧಿಸಲಾಗಿದೆ. ಅರ್ಹ ಮಹಿಳಾ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here