ಮಹಿಳೆಯರೇ ಟೆನ್ಯನ್ ಬಿಡಿ: ಶೀಘ್ರವೇ ಬರುತ್ತೆ ಗೃಹ ಲಕ್ಷ್ಮಿ ಹಣ ಎಂದ DCM ಡಿಕೆಶಿ!

0
Spread the love

ಮದ್ದೂರು:- ಕಳೆದ 2023 ರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಆದರೆ ಇದೀಗ ಕಳೆದೆರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಪಡೆಯದೆ ಮಹಿಳೆಯರು ಕಂಗಾಲಾಗಿದ್ದರು. ಇದೇ ವಿಚಾರವಾಗಿ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರ್ತಿದೆಯೋ? ಇಲ್ವೋ? ಎಂದು ಪ್ರಶ್ನಿಸಿದರು. ಆಗ ವೇದಿಕೆ ಮುಂಭಾಗದಲ್ಲಿದ್ದ ಮಹಿಳೆಯರು ಬರುತ್ತಿಲ್ಲ, ಬರುತ್ತಿಲ್ಲ ಎಂದು ಕೂಗಿದರು. ಆಗ ಡಿಕೆ ಶಿವಕುಮಾರ್ ಬರುತ್ತೆ ಬರುತ್ತೆ ಕಾಯುತ್ತಿರಿ. ಕಳೆದ ಒಂದು, ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಾತ್ರ ನಿಮ್ಮ ಖಾತೆ ಜಮೆ ಆಗಿಲ್ಲ. ಅನುದಾನ ಬಿಡುಗಡೆಯಾಗಿದೆ. ಶ್ರೀಘ್ರವೇ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ ಎಂದರು.

ಇನ್ನೂ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಇದೀಗ ಕಾರಣಾಂತರಗಳಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿದೆ.

ಈ ಹಣ ಆಗಸ್ಟ್ ವಾರಾಂತ್ಯದೊಳಗೆ ಜಮಾವಣೆಯಾಗಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.


Spread the love

LEAVE A REPLY

Please enter your comment!
Please enter your name here