ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಉಳ್ಳಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಶಾಲಾ ಕೊಠಡಿ, ಕಂಪೌಂಡ್, ಅಡುಗೆ ಕೋಣೆ, ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈಗಾಗಲೇ ಲಕ್ಷ್ಮೇಶ್ವರದ ಎರಡು ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಮತ್ತು ಪ್ರಧಾನಮಂತ್ರಿ ಗ್ರಾಮ ಸಡಕ್ ಇಲಾಖೆಗಳಿಗೆ ಸಂಬಂಧಿಸಿದ ರಸ್ತೆಗಳು ಹಾಳಾಗಿದ್ದು, ಈ ಕುರಿತು ಈಗಾಗಲೇ ಸಂಬಂಧಿಸಿದ ಸಚಿವರಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಅನುದಾನ ಬಂದ ಹಾಗೆ ಆದ್ಯತೆ ಮೇರೆಗೆ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರು ಈಳಿಗೇರ, ಜಗದೀಶ ಹಂಚಿನಾಳ, ಕೃಷ್ಣ ಲಮಾಣಿ, ಶೇಖರಗೌಡ ಪಾಟೀಲ, ಪ್ರಕಾಶ ಬಾಳಿಕಾಯಿ, ರಮೇಶ ಇಟಗಿ, ಗಂಗಾಧರ ಮೆಣಸಿನಕಾಯಿ, ಶಿವು ಕರಡಿ, ಎಲ್.ಪಿ. ಲಮಾಣಿ, ಶಂಕರ ಲಮಾಣಿ, ರಾಯಪ್ಪ ಹಂಚಿನಾಳ, ಅಶೋಕ ಶಿರಹಟ್ಟಿ ಮತ್ತಿತರರು ಇದ್ದರು.



