ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇತಿಹಾಸ ಪ್ರಸಿದ್ಧ ಲಕ್ಕುಂಡಿ ಗ್ರಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಇಲ್ಲಿಯ ಹಾಲಗೊಂಡ ಬಸವೇಶ್ವರ ಕೆರೆಯ ಪಕ್ಕದಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ಶೌಚಾಲಯ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪೂಜಾರ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ರಾಜ್ಯ ಸದಸ್ಯ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ 50 ಲಕ್ಷ ರೂ ಅನುದಾನದಲ್ಲಿ ಗ್ರಾಮದಲ್ಲಿ ಎರಡು ಹೈಟೆಕ್ ಶೌಚಾಲಯಗಳು ನಿರ್ಮಾಣವಾಗಲಿವೆ. ಒಂದು ಇಲ್ಲಿಯ ಪ್ರಸಿದ್ಧ ನನ್ನೇಶ್ವರ ಹಾಗೂ ಕಾಶಿ ವಿಶ್ವನಾಥ ಸ್ಮಾರಕಗಳನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ದಿಸೆಯಲ್ಲಿ, ಇನ್ನೊಂದು ಪ್ರವಾಸಿಗರು ಹೋಗುವ ಮುಖ್ಯ ರಸ್ತೆಯ ಎಂ.ಕೆ.ಬಿ.ಎಸ್ ಶಾಲೆಯ ಹತ್ತಿರ ಹೈಟೆಕ್ ಶೌಚಾಲಯ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಸ್.ಬಿ. ಕಲಕೇರಿ, ಮುಖಂಡರಾದ ದತ್ತಾತ್ರೇಯ ಜೋಶಿ, ವೀರಯ್ಯ ಗಂಧದ, ಗ್ರಾ.ಪಂ ಸದಸ್ಯರಾದ ರುದ್ರಪ್ಪ ಮುಸ್ಕಿನಭಾವಿ, ಪೀರಸಾಬ ನದಾಫ್, ಕುಬೇರಪ್ಪ ಬೆಂತೂರ, ಮಹಾಂತೇಶ ಕಮತರ, ವಿರೂಪಾಕ್ಷಿ ಬೆಟಗೇರಿ, ರಜೀಯಾಬೇಗಂ ತಹಸೀಲ್ದಾರ, ಪಿ.ಡಿ.ಒ ಅಮೀರನಾಯಕ, ಎಂ.ಎ. ಗಾಜಿ ಇದ್ದರು.



