ವಿಜಯಸಾಕ್ಷಿ ಸುದ್ದಿ, ಮುಳಗುಂದ : ಗುತ್ತಿಗೆದಾರರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಬೇಕು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಅವರು ಪಟ್ಟಣದ ಶಿದ್ದೇಶ್ವರ ನಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗದಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ, ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಮಂಜೂರಾದ 40 ಲಕ್ಷ ರೂ ಮೊತ್ತದಲ್ಲಿ ದಾವಲ ಮಲಿಕ್ ಪಹಡದ ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೆರ, ಬಿಇಓ ವಿ.ವಿ. ನಡುವಿನಮನಿ, ಕೊಟ್ರೇಶ ವಿಭೂತಿ, ಪ.ಪಂ ಸದಸ್ಯರಾದ ಮಾಹಾಂತೇಶ ನೀಲಗುಂದ, ಎಸ್.ಸಿ. ಬಡ್ನಿ, ಮಾಹಾದೇವಪ್ಪ ಗಡಾದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಸುಂಕಾಪೂರ, ಪ.ಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ, ತಾಜು ಕಿಂಡ್ರಿ, ದಾವುದ ಜಮಾಲಸಾಬನವರ, ಶಾಲಾ ಪ್ರಧಾನ ಗುರುಗಳು, ಸಹ ಶಿಕ್ಷಕ ವೃಂದದವರು ಇದ್ದರು.