ಜಲಪೂರಣದಿಂದ ಅಂತರ್ಜಲ ವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕೆ.ಸಿ. ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀಸಾಗರ ಪಂಪ್ ಹೌಸ್‌ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಪ್ರತಿನಿತ್ಯ 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಹರಿಸಲಾಗುತ್ತಿದೆ ಎಂದರು.

ಕೆ.ಸಿ. ವ್ಯಾಲಿ 2ನೇ ಹಂತದ ಯೋಜನೆಯಡಿ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.

ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಿಲ್ಲದಿರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, 446 ಕೋಟಿ ರೂ ವೆಚ್ಚದಲ್ಲಿ ಯೋಜನೆ ಕೈಗೊಳ್ಳಲಾಗಿದೆ ಎಂದರು.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂಬುದು ನಿರೂಪಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here