ಮೈಸೂರು: ಜಿಎಸ್ ಟಿ ಕಡಿತ ಮಾಡಿ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ತಲೆಗೆ ಹೇಗೆಲ್ಲಾ ಟೋಪಿ ಹಾಕ್ತಿದ್ದಾರೆ ಎಂದು ಜನತೆ ತಿಳಿದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು. GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.